ನವದೆಹಲಿ : ಸೆಪ್ಟೆಂಬರ್ ಅಂತ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾಗೆ ಭೇಟಿ ನೀಡುವ ಸಾಧ್ಯತೆ ಇದೆ.
ಈ ವರೆಗೂ ಈ ವಿಚಾರವಾಗಿ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲದಿದ್ದರೂ ಎಎನ್ಐ ವರದಿಯ ಪ್ರಕಾರ ಇದಕ್ಕಾಗಿ ತಯಾರಿಗಳು ನಡೆಯುತ್ತಿವೆಯಂತೆ. ಈ ಬೆಳವಣಿಗೆಗಳ ಬಗ್ಗೆ ಅರಿವಿರುವ ಮಾಹಿತಿಯ ಪ್ರಕಾರ ವೇಳಾಪಟ್ಟಿ ನಿಗದಿಯಾಗಬೇಕಿದೆ.
ತಾತ್ಕಾಲಿಕ ಯೋಜನೆಯ ಪ್ರಕಾರ ಸೆ.23-24 ರಂದು ಮೋದಿ ಅಮೆರಿಕಾಗೆ ಭೇಟಿ ನೀಡಲಿದ್ದಾರೆ. 2019 ರಲ್ಲಿ ಮೋದಿ ಅಮೆರಿಕಾಗೆ ಭೇಟಿ ನೀಡಿ ಹೌಸ್ಟನ್ ನಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ್ದರು.