ದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಕಸ್ತೂರಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ನೂತನ ರಕ್ಷಣಾ ಕಚೇರಿಗಳ ಸಂಕೀರ್ಣಗಳಿಗೆ ಚಾಲನೆ ನೀಡಿದರು.
ರಕ್ಷಣಾ ಕಚೇರಿಗಳನ್ನು ಉದ್ಘಾಟಿಸಿದ ನಂತರ ಮೋದಿ ನೌಕಾಪಡೆ, ವಾಯುಪಡೆ ಮತ್ತು ನಾಗರಿಕ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸಶಸ್ತ್ರ ಪಡೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.
ಹೊಸ ರಕ್ಷಣಾ ಕಚೇರಿಗಳು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಸೇನೆ, ನೌಕಾಪಡೆ ಮತ್ತು ವಾಯುಪಡೆ ಸೇರಿದಂತೆ ರಕ್ಷಣಾ ಸಚಿವಾಲಯ ಮತ್ತು ಸಶಸ್ತ್ರ ಪಡೆಯ ಸುಮಾರು 7,000 ಅಧಿಕಾರಿಗಳಿಗೆ ಸ್ಥಳಾವಕಾಶ ಕಲ್ಪಿಸಿಕೊಡಲಿದೆ