News Kannada
Thursday, September 29 2022

ದೆಹಲಿ

ಎನ್‌ಡಿಎ ಪ್ರವೇಶ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ನಿರಾಕರಿಸಿದ ಸುಪ್ರೀಂಕೋರ್ಟ್ - 1 min read

Photo Credit :

ನವದೆಹಲಿ: ಮುಂದಿನ ವರ್ಷದಿಂದ ಮಹಿಳಾ ಅಭ್ಯರ್ಥಿಗಳು ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಪ್ರವೇಶ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ.

ಪರೀಕ್ಷೆ ಸಂಬಂಧ ಕುಶ್ ಕಲ್ರಾ ಎಂಬುವವರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿ, ಅರ್ಜಿದಾರರ ಪರವಾಗಿ ಹಿರಿಯ ವಕೀಲ ಚಿನ್ಮಯ್ ಪ್ರದೀಪ್ ಶರ್ಮಾ ಅವರು ನ್ಯಾಯಾಲಯದಲ್ಲಿ ಹಾಜರಿದ್ದರು.

ಅರ್ಜಿಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಎಸ್ ಕೆ ಕೌಲ್ ನೇತೃತ್ವದ ಪೀಠ, ಮೇ 2022 ರಲ್ಲಿ ಪರೀಕ್ಷೆಗೆ ಹಾಜರಾದರೆ ಜೂನ್ 2023 ರಲ್ಲಿ ಪ್ರವೇಶಾತಿ ನಡೆಯುತ್ತದೆ. ನಾವು ಒಂದು ವರ್ಷದವರೆಗೆ ವಿಳಂಬ ಮಾಡಲು ಸಾಧ್ಯವಿಲ್ಲ. ನಾವು ಹುಡುಗಿಯರಿಗೆ ಭರವಸೆ ನೀಡಿದ್ದೇವೆ. ನಾವು ಈಗ ಆ ಭರವಸೆಯನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಅಲ್ಲದೆ, ಈ ವರ್ಷವೇ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಪರೀಕ್ಷೆ ಬರೆಯಲು ಮಹಿಳೆಯರಿಗೆ ಅವಕಾಶ ನೀಡಬೇಕು ಎಂದು ಆದೇಶಿಸಿದೆ.

ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಸಶಸ್ತ್ರ ಪಡೆಗಳು ಅತ್ಯುತ್ತಮ ಪ್ರತಿಕ್ರಿಯಾ ತಂಡವಾಗಿದ್ದು, ಎನ್‌ಡಿಎಯಲ್ಲಿ ವಿಳಂಬವಿಲ್ಲದೆ ಮಹಿಳೆಯರ ಸೇರ್ಪಡೆಗೆ ಹಾದಿ ಸುಗಮಗೊಳಿಸಲು ಅಗತ್ಯವಾದ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಆಶಿಸುತ್ತೇವೆ. ಇದಕ್ಕಾಗಿ ಯುಪಿಎಸ್‌ಸಿ ಸಹಯೋಗದೊಂದಿಗೆ ರಕ್ಷಣಾ ಇಲಾಖೆಯಿಂದ ಅಗತ್ಯವಾದ ಕೆಲಸಗಳನ್ನು ಮಾಡಬೇಕು ಎಂದು ತಿಳಿಸಿದೆ.

See also  ದೇಶದಲ್ಲಿನ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು