News Kannada
Wednesday, March 22 2023

ದೇಶ

ಕೃಷಿ ಪತ್ತಿನ ಸಹಕಾರ ಸಂಘ ಸಂಖ್ಯೆಯನ್ನು 3 ಲಕ್ಷಕ್ಕೆ ಹೆಚ್ಚಳ : ಅಮಿತ್ ಶಾ

Photo Credit :

ನವದೆಹಲಿ: ಕೇಂದ್ರ ಸರ್ಕಾರ ಶೀಘ್ರದಲ್ಲೇ ಹೊಸ ಸಹಕಾರಿ ನೀತಿಯನ್ನು ಹೊರತರಲಿದೆ ಮತ್ತು ಸಹಕಾರಿ ಚಳುವಳಿಯನ್ನು ಬಲಪಡಿಸಲು ರಾಜ್ಯಗಳ ಜೊತೆ ಕೆಲಸ ಮಾಡಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.

ಮುಂದಿನ ಐದು ವರ್ಷಗಳಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ಪಿಎಸಿ)ಗಳ ಸಂಖ್ಯೆಯನ್ನು 3 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ್ದಾರೆ. ಪ್ರಸ್ತುತ, ಸುಮಾರು 65,000 ಪಿಎಸಿಗಳಿವೆ.

ರಾಷ್ಟ್ರೀಯ ಸಹಕಾರಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಈ ವರ್ಷದ ಜುಲೈನಲ್ಲಿ ಸಹಕಾರ ಸಚಿವಾಲಯವನ್ನು ರಚಿಸಲಾಯಿತು. ಸಹಕಾರಿ ವಲಯ ರಾಜ್ಯದ ವಿಷಯವಾಗಿರುವುದರಿಂದ ಕೇಂದ್ರ ಸರ್ಕಾರ ಏಕೆ ಈ ಹೊಸ ಸಚಿವಾಲಯವನ್ನು ರಚಿಸಿತು ಎಂದು ಕೆಲವರು ಆಶ್ಚರ್ಯ ಪಡುತ್ತಾರೆ. ಆದರೆ ಅದಕ್ಕೆ ಕಾನೂನಾತ್ಮಕ ಪ್ರತಿಕ್ರಿಯೆ ನೀಡುತ್ತೇವೆ. ಈ ಬಗ್ಗೆ ನಾನು ಹೆಚ್ಚು ವಾದ ಮಾಡಲು ಬಯಸುವುದಿಲ್ಲ ಎಂದರು.

ಈ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಗಳೊಂದಿಗೆ ಸಹಕರಿಸುತ್ತದೆ ಮತ್ತು “ಯಾವುದೇ ಘರ್ಷಣೆ ಇರುವುದಿಲ್ಲ” ಎಂದು ಅಮಿತ್ ಶಾ ಒತ್ತಿ ಹೇಳಿದರು.

ಈ ಸಮಾವೇಶದಲ್ಲಿ ವಿವಿಧ ಸಹಕಾರಿ ಸಂಘಗಳ 2,100 ಪ್ರತಿನಿಧಿಗಳು ಮತ್ತು ಸುಮಾರು 6 ಕೋಟಿ ಜನ ಆನ್‌ಲೈನ್ ಮೂಲಕ ಭಾಗವಹಿಸಿದ್ದರು.

See also  ಹೊಸದಾಗಿ 14,313 ಕೋವಿಡ್ ಪ್ರಕರಣಗಳ ದಾಖಲಿಸಿದ ಭಾರತ 24 ಗಂಟೆಗಳಲ್ಲಿ 13,000 ಕ್ಕಿಂತ ಹೆಚ್ಚು ಚೇತರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು