News Kannada
Wednesday, November 30 2022

ದೇಶ

ಉ. ಪ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ - 1 min read

Photo Credit :

ನವದೆಹಲಿ : “ಲಖೀಂಪುರ ಖೇರಿಯಲ್ಲಿ 8 ಮಂದಿ ಸಾವಿಗೀಡಾಗಿ 4 ದಿನಗಳು ಕಳೆದವು. ನೀವು ಎಷ್ಟು ಮಂದಿ ಯನ್ನು ಬಂಧಿಸಿದ್ದೀರಿ? ಯಾರ ವಿರುದ್ಧ ಎಫ್ ಐಆರ್‌ ದಾಖಲಿಸಿದ್ದೀರಿ?’ ಇದು ಉತ್ತರಪ್ರದೇಶ ಸರ್ಕಾರಕ್ಕೆ ಗುರುವಾರ ಸುಪ್ರೀಂ ಕೋರ್ಟ್‌ ಕೇಳಿರುವ ಪ್ರಶ್ನೆ. ಲಖೀಂಪುರ ಘರ್ಷಣೆಗೆ ಸಂಬಂಧಿಸಿದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸಿಜೆಐ ಎನ್‌.ವಿ.ರಮಣ ನೇತೃತ್ವದ ನ್ಯಾಯ ಪೀಠ, “ಲಖೀಂಪುರ ಘಟನೆಯು ಅತ್ಯಂತ ದುರದೃಷ್ಟಕ ಶುಕ್ರವಾರ ನಮಗೆ ಈ ಬಗ್ಗೆ ಸ್ಥಿತಿಗತಿ ವರದಿ ಸಲ್ಲಿಸ ಬೇಕು.

ಯಾರ ವಿರುದ್ಧ ಎಫ್ ಐ ಆರ್‌ ದಾಖಲಾಗಿದೆ? ಎಷ್ಟು ಮಂದಿಯನ್ನು ಬಂಧಿಸಿದ್ದೀರಿ ಎಂಬೆಲ್ಲ ವಿವರವನ್ನೂ ನಮಗೆ ನೀಡಬೇಕು’ ಎಂದು ಸೂಚಿಸಿತು. “ವಿಚಾರಣೆ ವೇಳೆ ನಮಗೆ ಬಂದಿರುವ ಮಾಹಿತಿ ಪ್ರಕಾರ, ಮೃತ ವ್ಯಕ್ತಿಯೊಬ್ಬರ ತಾಯಿಯು ತನ್ನ ಮಗ  ನನ್ನು ಕಳೆದು ಕೊಂಡು ಆಘಾತಕ್ಕೀಡಾಗಿ ಆಸ್ಪತ್ರೆ ಸೇರಿದ್ದಾರೆ.
ಅವರಿಗೆ ಉತ್ತರ ಪ್ರದೇಶ ಸರ್ಕಾರ ಕೂಡಲೇ ವೈದ್ಯಕೀಯ ಚಿಕಿತ್ಸೆಗೆ ನೆರವಾಗಬೇಕು’ ಎಂದು ನ್ಯಾಯ ಪೀಠ ಹೇಳಿದೆ.

ಸುಪ್ರೀಂ  ಕೋರ್ಟ್‌ ನಿರ್ದೇಶನದ ಬೆನ್ನಲ್ಲೇ ಉತ್ತರ ಪ್ರದೇಶ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆದರೆ, ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಷ್‌ ಮಿಶ್ರಾ ತಲೆಮರೆಸಿಕೊಂಡಿದ್ದಾರೆ. ತನಿಖೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್‌ ಜಾರಿ ಮಾಡಲಾಗಿದೆ. ಸಮನ್ಸ್‌ಗೆ ಪ್ರತಿಕ್ರಿಯಿಸದಿದ್ದರೆ, ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಐಜಿಪಿ ಲಕ್ಷ್ಮೀ ಸಿಂಗ್‌ ಹೇಳಿದ್ದಾರೆ.

ಜತೆಗೆ, ಆಶಿಷ್‌ ಮಿಶ್ರಾಗೆ ಕಳುಹಿಸಲಾಗಿರುವ ಸಮನ್ಸ್‌ಗೆ ಯಾವುದೇ ಕಾಲ ಮಿತಿ ಹೇರಲಾಗಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. ಜತೆಗೆ, ವಶಕ್ಕೆ ಪಡೆಯಲಾದ ಇಬ್ಬರು ಆರೋಪಿಗಳ ಕುರಿತು ಮಾಹಿತಿಯನ್ನೂ ಅವರು ನೀಡಿಲ್ಲ.

See also  ಸುಪ್ರೀಂ ಕೋರ್ಟ್ ಕೊಲಿಜಿಯಂ ಗೌಹಾತಿ ಹೈಕೋರ್ಟ್‌ನ 3 ಖಾಯಂ ನ್ಯಾಯಾಧೀಶರ ಹೆಸರನ್ನು ಅನುಮೋದಿಸಿದೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು