NewsKarnataka
Wednesday, November 24 2021

ದೆಹಲಿ

ಕೇರಳದ ಮುಖ್ಯಮಂತ್ರಿ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ

ನವದೆಹಲಿ : ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಾತುಕತೆ ನಡೆಸಿದ್ದು, ಭಾರೀ ಮಳೆ ಹಾಗೂ ಭೂ ಕುಸಿತದಿಂದ ಉಂಟಾಗಿರುವ ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಿದ್ದಾರೆ.

ಮಧ್ಯ ಕೇರಳದ ಎರಡು ಜಿಲ್ಲೆಗಳ ಗುಡ್ಡಗಾಡು ಪ್ರದೇಶದಲ್ಲಿ ಪ್ರವಾಹ ಹಾಗೂ ಕುಸಿತದಿಂದ ಮೃತಪಟ್ಟಿರುವವರ ಸಂಖ್ಯೆ 19ಕ್ಕೆ ಏರಿಕೆಯಾಗಿದ್ದು, ಭಾನುವಾರ ಅವಶೇಷಗಳಡಿ ಸಿಲುಕಿದ್ದ ಹಲವು ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಹೊರಗೆ ತಂದಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕೇರಳ ಮುಖ್ಯಮಂತ್ರಿ ವಿಜಯನ್ ಪಿಣರಾಯ್ ಜೊತೆಗೆ ಮಾತುಕತೆ ನಡೆಸಲಾಗಿದ್ದು, ಕೇರಳದಲ್ಲಿನ ಭಾರೀ ಮಳೆ ಮತ್ತು ಭೂಕುಸಿತದಿಂದ ಉಂಟಾಗಿರುವ ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಲಾಗಿದೆ. ರಕ್ಷಣಾ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ನಿರತರಾಗಿದ್ದು, ಪ್ರವಾಹ ಪೀಡಿತ ಹಾಗೂ ಗಾಯಾಳುಗಳಿಗೆ ಅಗತ್ಯ ನೆರವು ನೀಡುತ್ತಿದ್ದಾರೆ. ಪ್ರತಿಯೊಬ್ಬರು ಸುರಕ್ಷತೆ ಹಾಗೂ ಚೆನ್ನಾಗಿರುವಂತೆ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ಕೇರಳದಲ್ಲಿನ ಭಾರೀ ಮಳೆ ಮತ್ತು ಭೂಕುಸಿತದಿಂದ ಕೆಲವರು ಮೃತಪಟ್ಟಿರುವುದಕ್ಕೆ ನೋವು ವ್ಯಕ್ತಪಡಿಸಿದ್ದು, ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!