NewsKarnataka
Sunday, January 23 2022

ದೆಹಲಿ

ಪ್ರಧಾನಮಂತ್ರಿ ಗರಿಬ್ ಕಲ್ಯಾಣ ಯೋಜನೆ: 5 ಕೆಜಿ ಉಚಿತ ರೇಷನ್ ಇನ್ನೂ 4 ತಿಂಗಳು ಮುಂದುವರಿಕೆ

ನವದೆಹಲಿ: ಕೊರೋನಾ ಸಂಕಷ್ಟದ ಕಾರಣದಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ 5 ಕೆಜಿ ಉಚಿತ ಪಡಿತರ ವಿತರಿಸುವ ಯೋಜನೆಯನ್ನು ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಿಸಲಾಗಿದೆ. ಗರಿಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಪಡಿತರ ಫಲಾನುಭವಿಗಳಿಗೆ ಉಚಿತ ಪಡಿತರ ನೀಡಲಾಗುತ್ತದೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

ಇದಕ್ಕಾಗಿ 53,344 ಕೋಟಿ ರೂ. ವೆಚ್ಚ ಮಾಡಲಾಗುವುದು. ಇದರೊಂದಿಗೆ ಉಚಿತ ಪಡಿತರ ವಿತರಣೆ ಮಾಡಲು ಸರ್ಕಾರ 2.6 ಲಕ್ಷ ಕೋಟಿ ರೂ. ವೆಚ್ಚ ಮಾಡಿದಂತಾಗುತ್ತದೆ. ಪಡಿತರ ಚೀಟಿದಾರರಿಗೆ ನೀಡುವ ಪಡಿತರದ ಜೊತೆಗೆ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯ ನೀಡಲಾಗುವುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Subscribe to our Brand New YouTube Channel

Subscribe Newsletter

Get latest news karnataka updates on your email.