ನವದೆಹಲಿ: ಕಳೆದ 24 ಗಂಟೆಯಲ್ಲಿ ಮತ್ತೆ 9,765 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 477 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಸಂಖ್ಯೆ 469724 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 99763 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8548 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34037054 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 11,08,467 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 80,35,261 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,24,96,19,515 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.