ನವದೆಹಲಿ : ರಾಜ್ಯದಲ್ಲಿ ಇಬ್ಬರಿಗೆ ಕೊರೊನಾ ರೂಪಾಂತರಿ ತಳಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಆತಂಕ ಪಡುವ ಅಗತ್ಯವಿಲ್ಲ, ಒಮಿಕ್ರಾನ್ ಅಪಾಯಕಾರಿ ವೈರಸ್ ಅಲ್ಲ ಎಂದು ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಸಿಎಂ, ಒಮಿಕ್ರಾನ್ ತಡೆಗೆ ಈಗಾಗಲೇ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಜ್ಞರು ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಅಗತ್ಯಬಿದ್ದರೆ ಮಾರ್ಗಸೂಚಿ ಬದಲಿಸಲಾಗುವುದು ಎಂದು ಹೇಳಿದರು.
ಒಮಿಕ್ರಾನ್ ಸೋಂಕಿತರ ಚಿಕಿತ್ಸೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ ಆದರೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.