ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 9,216 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 391 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24ಗಂಟೆಗಳಲ್ಲಿ 213 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ದೇಶದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ.98.35ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ 0.80ರಷ್ಟಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.
ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,46,15,757ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ಡಿಸೆಂಬರ್ 03) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಕೋವಿಡ್ 19 ಸೋಂಕಿನಿಂದ ದೇಶಾದ್ಯಂತ ಈವರೆಗೆ 4,70,115 ಮಂದಿ ಸಾವನ್ನಪ್ಪಿದ್ದಾರೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 99,976ಕ್ಕೆ ತಲುಪಿದೆ. ಇದು 2020ರ ಮಾರ್ಚ್ ನಂತರದ ಕನಿಷ್ಠ ಪ್ರಮಾಣದ್ದಾಗಿದೆ.