ನವದೆಹಲಿ: ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕದ ಮಧ್ಯೆ ಶುಕ್ರವಾರಕ್ಕೆ ಹೋಲಿಸಿದರೆ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ.
ಇನ್ನು ದೇಶದಲ್ಲಿ 99,974 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8,190 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,40,53,866 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇದರ ಮಧ್ಯೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 8,603 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 415 ಮಂದಿ ಮೃತಪಟ್ಟಿದ್ದಾರೆ.ಕಳೆದ 24 ಗಂಟೆಯಲ್ಲಿ 73.63,706 ಲಕ್ಷ ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ ಒಟ್ಟು 1,26,53,44,975 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.