News Kannada
Saturday, January 28 2023

ದೆಹಲಿ

ಅರ್ಧ ಜನಸಂಖ್ಯೆಗೆ ಲಸಿಕೆ; 127.61 ಕೋಟಿ ಡೋಸ್‌ ಪೂರ್ಣ ಪ್ರಮಾಣದಲ್ಲಿ ಲಸಿಕೆ

Photo Credit :

ಹೊಸದಿಲ್ಲಿ: ದೇಶದಲ್ಲಿ ಒಮಿಕ್ರಾನ್‌ ರೂಪಾಂತರಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಅದಕ್ಕೆ ಪೂರಕವಾಗಿ ಲಸಿಕೆ ಹಾಕಿಸಿಕೊಳ್ಳು ವವರ ಸಂಖ್ಯೆಯೂ ಹೆಚ್ಚಾಗತೊಡಗಿದೆ.ದೇಶದಲ್ಲಿ 127.61 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ ಎಂದೂ ಅವರು ಬರೆದುಕೊಂಡಿದ್ದಾರೆ. ಶೇ.84.8 ಮಂದಿ 18 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್‌ ಲಸಿಕೆ ನೀಡಲಾಗಿದೆ. ಅದಕ್ಕಾಗಿ 1,32,44,514 ಸೆಷನ್‌ಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ರವಿವಾರಕ್ಕೆ ಮುಕ್ತಾಯವಾದಂತೆ ದೇಶದಲ್ಲಿ 18 ವರ್ಷ ಮೇಲ್ಪಟ್ಟವರ ಒಟ್ಟು ಸಂಖ್ಯೆಯ ಶೇ.50ರಷ್ಟು ಮಂದಿಗೆ ಪೂರ್ಣ ಪ್ರಮಾಣದಲ್ಲಿ ಲಸಿಕೆ ಹಾಕಲಾಗಿದೆ.ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್‌ಸುಖ್‌ ಮಾಂಡವೀಯಾ ಟ್ವೀಟ್‌ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆ ಹಿನ್ನೆಲೆಯಲ್ಲಿ ಜ.16ರಂದು 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆರಂಭಿಸಲಾಗಿತ್ತು. ಕೇವಲ 11 ತಿಂಗಳಲ್ಲಿ ಪ್ರಾಪ್ತ ವಯಸ್ಕರ ಪೈಕಿ ಶೇ.50ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ ಎಂದು ಸಚಿವ ಮನ್‌ಸುಖ್‌ ಮಾಂಡವೀಯಾ ಟ್ವೀಟ್‌ನಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. ಮಾ.1ರಿದ 60 ವರ್ಷ ಮೇಲ್ಪಟ್ಟ ವರಿಗೆ ಮತ್ತು ಎ.1ರಿಂದ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಿಸುವ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗಿತ್ತು.

 

See also  ಅಸ್ಟ್ರಾಜೆನೆಕಾ ಲಸಿಕೆ: ಬ್ರಿಟನ್‌ನಲ್ಲಿ ವರ್ಷಾಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು