ನವದೆಹಲಿ: ಒಮಿಕ್ರಾನ್ ಭೀತಿ ನಡುವೆಯೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 8,439 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಸಾವಿನ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 195 ಬಲಿಯಾಗಿದ್ದಾರೆ.
ಇನ್ನು ದೇಶದಲ್ಲಿ 93733 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 9525 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34089137 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 473952 ಕ್ಕೆ ಏರಿಕೆಯಾಗಿದೆ.
ನಿನ್ನೆ ದೇಶದಲ್ಲಿ 12,13,130 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 73,62,000 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,29,54,19,975 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.