ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಮತ್ತೊಬ್ಬರಿಗೆ ಒಮಿಕ್ರಾನ್ ವೈರಸ್ ಸೋಂಕು ದೃಢಪಟ್ಟಿದೆ. ದೆಹಲಿಗೆ ಜಿಂಬಾಂಬೆಯಿಂದ ವಾಪಾಸ್ ಆಗಿದ್ದಂತ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಅವರನ್ನು ಐಸೋಲೇಷನ್ ಮಾಡಿ, ಒಮಿಕ್ರಾನ್ ಸೋಂಕು ಪತ್ತೆ ಪರೀಕ್ಷೆಗಾಗಿ ಗಂಟಲು ಮಾದರಿಯನ್ನು ಕಳುಹಿಸಲಾಗಿತ್ತು. ಇದೀಗ ಈ ಪರೀಕ್ಷೆಯಲ್ಲಿ ಒಮಿಕ್ರಾನ್ ವೈರಸ್ ಸೋಂಕು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದರಿಂದಾಗಿ ದೇಶದಲ್ಲಿ ಒಮಿಕ್ರಾನ್ ವೈರಸ್ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಈಗಾಗಲೇ ಒಬ್ಬರಿಗೆ ದೆಹಲಿಯಲ್ಲಿ ಒಮಿಕ್ರಾನ್ ವೈರಸ್ ಸೋಂಕು ದೃಢಪಟ್ಟಿತ್ತು.
ಈ ಬಳಿಕ ಇಂದು ಮತ್ತೊಬ್ಬರಿಗೆ ಒಮಿಕ್ರಾನ್ ವೈರಸ್ ಸೋಂಕು ತಗುಲಿರೋದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹೀಗಾಗಿ ದೆಹಲಿಯಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ಎರಡಕ್ಕೆ ಏರಿದ್ದರೇ, ದೇಶದಲ್ಲಿ 33ಕ್ಕೆ ಏರಿಕೆಯಾಗಿದೆ.
ಮತ್ತೊಂದೆಡೆ ದೇಶಾದ್ಯಂತ ಕಳೆದ 24 ಗಂಟೆಯಲ್ಲಿ ಹೊಸದಾಗಿ 7,992 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 393 ಜನರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 7,992 ಹೊಸ ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿವೆ. ಅಲ್ಲದೇ ಸೋಂಕಿತರಾದಂತ 9,265 ಜನರು ಚೇತರಿಸಿಕೊಂಡಿರೋದಾಗಿ ತಿಳಿಸಿದೆ.
ಇನ್ನೂ ಸೋಂಕಿನಿಂದಾಗಿ 393 ಜನರು ಸಾವನ್ನಪ್ಪಿದ್ದಾರೆ. 7,992 ಜನರಿಗೆ ಕೋವಿಡ್ ದೃಢಪಟ್ಟ ನಂತ್ರ ದೇಶದಲ್ಲಿ 93,277 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.
ಏತನ್ಮಧ್ಯೆ, ಇಲ್ಲಿಯವರೆಗೆ 131.99 ಕೋಟಿ ಲಸಿಕೆ ಡೋಸ್ ಗಳನ್ನು ನೀಡಲಾಗಿದೆ.