News Kannada
Tuesday, February 07 2023

ದೆಹಲಿ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,326 ಹೊಸ ಕೊರೋನಾ ಪ್ರಕರಣ ವರದಿ

Photo Credit :

ನವದೆಹಲಿ : ಭಾರತ ಸೇರಿದಂತೆ ಜಗತ್ತಿನಾದ್ಯಂತ ಓಮಿಕ್ರಾನ್ ಸೋಂಕಿನ ಭೀತಿ ಹೆಚ್ಚಾಗುತ್ತಿದೆ. ಕೋವಿಡ್ ಮೂರನೇ ಅಲೆಯ ಸಂದರ್ಭದಲ್ಲಿ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5 ಸಾವಿರದ 326 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದ್ದು, 453 ಮಂದಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 6,563 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 79 ಸಾವಿರದ 097 ಆಗಿದೆ. ಹೊಸ ಸೋಂಕಿತರ ಸಂಖ್ಯೆ ಮೊನ್ನೆ ದೇಶಾದ್ಯಂತ 7,081 ಇದ್ದರೆ ನಿನ್ನೆ ಕಡಿಮೆಯಾಗಿದೆ. 8 ಸಾವಿರದ 043 ಮಂದಿ ನಿನ್ನೆ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೋವಿಡ್ ನಿಂದ ಇದುವರೆಗೆ ದೇಶದಲ್ಲಿ 3 ಕೋಟಿಯ 41 ಲಕ್ಷದ 95 ಸಾವಿರದ 060 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟವರ ಸಂಖ್ಯೆ 4 ಲಕ್ಷದ 78 ಸಾವಿರದ 007ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೋವಿಡ್ ವೈರಸ್ ನ ವಿರುದ್ಧ ಹೋರಾಡಲು ಲಸಿಕಾ ಅಭಿಯಾನ ಆರಂಭವಾದ ನಂತರ ಇಲ್ಲಿಯವರೆಗೆ 138 ಕೋಟಿಯ 34 ಲಕ್ಷ ಡೋಸ್ ಲಸಿಕೆ ವಿತರಣೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿಯೇ ಫಲಾನುಭವಿಗಳಿಗೆ ಶೇಕಡಾ 100ರಷ್ಟು ಲಸಿಕೆ ನೀಡಿದ ಮೊದಲ ರಾಜ್ಯವಾಗಿ ಹಿಮಾಚಲ ಪ್ರದೇಶ ಹೊರಹೊಮ್ಮಿದ್ದು ಆರೋಗ್ಯ ಇಲಾಖೆಯ ಕಾರ್ಯಕರ್ತರ ಪರಿಶ್ರಮದಿಂದ ಇದು ಸಾಧ್ಯವಾಗಿದೆ.

ಇದುವರೆಗೆ ದೇಶದಲ್ಲಿ 66 ಕೋಟಿಯ 61 ಲಕ್ಷದ 26 ಸಾವಿರದ 659 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು ನಿನ್ನೆ ಒಂದೇ ದಿನ 10 ಲಕ್ಷದ 14 ಸಾವಿರದ 079 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.

200 ಓಮಿಕ್ರಾನ್ ಕೇಸು: ಇನ್ನು ಭಾರತದ ವಿವಿಧ ರಾಜ್ಯಗಳಲ್ಲಿ ವರದಿಯಾದಂತೆ ಇದುವರೆಗೆ 200 ಓಮಿಕ್ರಾನ್ ಕೇಸುಗಳು ಪತ್ತೆಯಾಗಿವೆ. ಯಾವ ರಾಜ್ಯದಲ್ಲಿ ಎಷ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

See also  ದೇಶದಲ್ಲಿ ಒಮಿಕ್ರೋನ್‌ ಸೋಂಕಿತರ ಸಂಖ್ಯೆ 169ಕ್ಕೆ ಏರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು