News Kannada
Friday, October 07 2022

ದೆಹಲಿ

ಓಮಿಕ್ರಾನ್ : ದೇಶದಲ್ಲಿ ಒಂದೇ ದಿನ 128 ಹೊಸ ಕೇಸ್‌ ಪತ್ತೆ - 1 min read

Photo Credit :

ನವದೆಹಲಿ: ದೇಶದಲ್ಲಿ ಒಂದೇ ದಿನ 128 ಹೊಸ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಪ್ರಕರಣಗಳ ಸಂಖ್ಯೆ 781ಕ್ಕೆ ಏರಿಕೆಯಾಗಿದೆ. ಅವರಲ್ಲಿ 241 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮಂಗಳವಾರ 653 ಒಮಿಕ್ರಾನ್​​ ಪ್ರಕರಣಗಳು ಪತ್ತೆಯಾಗಿದ್ದವು. ದೇಶದ ಒಟ್ಟಾರೆ ಓಮಿಕ್ರಾನ್ ಪ್ರಕರಣಗಳ ಪೈಕಿ ದೆಹಲಿಯಲ್ಲಿ ಇದುವರೆಗೆ ಅತಿ ಹೆಚ್ಚು 238 ಪ್ರಕರಣಗಳು ವರದಿಯಾಗಿದ್ದು, ಮಹಾರಾಷ್ಟ್ರ (167) ಮತ್ತು ಗುಜರಾತ್ (73) ನಂತರದ ಸ್ಥಾನದಲ್ಲಿವೆ.ಓಮಿಕ್ರಾನ್ ಪ್ರಕರಣಗಳನ್ನು ವರದಿ ಮಾಡಿರುವ ಇತರ ರಾಜ್ಯಗಳೆಂದರೆ ತೆಲಂಗಾಣ 62, ರಾಜಸ್ಥಾನ 46, ಕರ್ನಾಟಕ 34, ತಮಿಳುನಾಡು 34 ಮತ್ತು ಹರಿಯಾಣದಲ್ಲಿ 12 ಪ್ರಕರಣಗಳು ವರದಿಯಾಗಿವೆ

ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 9,195 ಹೊಸ ಕೋವಿಡ್​​ ಪ್ರಕರಣಗಳು ಕಂಡುಬಂದಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 34,808,886 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 77,002 ಸಕ್ರಿಯ ಪ್ರಕರಣಗಳಿವೆ. ಪ್ರಸ್ತುತ ಚೇತರಿಕೆ ದರ ಶೇ.98.40 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 7,347 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ 3,42,51,292 ಮಂದಿ ಚೇತರಿಸಿಕೊಂಡಿದ್ದಾರೆ. ಪಾಸಿಟಿವಿಟಿ ದರ ಶೇ. 0.79 ರಷ್ಟಿದೆ.

See also  ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಸಂತ್ರಸ್ತರ ಕಡಿಮೆ ವಯಸ್ಸು ಮರಣದಂಡನೆ ವಿಧಿಸಲು ಮುಖ್ಯವಾಗುವುದಿಲ್ಲ: ಸುಪ್ರೀಂ ಕೋರ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು