News Kannada
Thursday, December 08 2022

ದೆಹಲಿ

ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 4,033ಕ್ಕೆ ಏರಿಕೆ, 1,552 ಮಂದಿ ಗುಣಮುಖ

Photo Credit :

ನವದಹಲಿ : ಭಾರತದಲ್ಲಿ ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ಹೊತ್ತಿನಲ್ಲೇ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 4,033 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 4,033ಕ್ಕೆ ಏರಿಕೆಯಾಗಿದೆ.ಈ ವರೆಗೂ 1,552 ಮಂದಿ ಗುಣಮುಖರಾಗಿದ್ದಾರೆಂದು ತಿಳಿಸಿದೆ.

ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 27 ರಾಜ್ಯಗಳಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.

ಈ ಪೈಕಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಅಂದರೆ 1,276 ಮಂದಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 454 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ ಎನ್ನಲಾಗಿದೆ.

ಓಮಿಕ್ರಾನ್ ಪ್ರಕರಣಗಳನ್ನು ವರದಿ ಮಾಡಿರುವ ಇತರ ರಾಜ್ಯಗಳೆಂದರೆ ರಾಜಸ್ಥಾನ 529, ದೆಹಲಿ 513, ಕರ್ನಾಟಕ 441, ಕೇರಳ 333, ಗುಜರಾತ್ 236, ತಮಿಳುನಾಡು 185, ಹರಿಯಾಣ 123, ತೆಲಂಗಾಣ 123, ಉತ್ತರಪ್ರದೇಶ 113, ಒಡಿಶಾ 74, ಆಂಧ್ರಪ್ರದೇಶ 28, ಪಂಜಾಬ್ 27, ಪಶ್ಚಿಮ ಬಂಗಾಳ 27, ಗೋವಾ 19, ಮಧ್ಯಪ್ರದೇಶ, 10, ಅಸ್ಸಾಂ 9, ಉತ್ತರಾಖಂಡ 8, ಮೇಘಾಲಯ 4, ಅಂಡಮಾನ್ ನಿಕೋಬಾರ್ 3, ಚಂಡೀಗಢ 3, ಜಮ್ಮು ಮತ್ತು ಕಾಶ್ಮೀರ 3, ಪಾಂಡಿಚೆರಿ 2 ಪ್ರಕರಣಗಳು ವರದಿಯಾಗಿವೆ.

ಅಂತೆಯೇ ಹಿಮಾಚಲಪ್ರದೇಶ, ಲಡಾಖ್, ಛತ್ತೀಸ್ಗಢ1, ಮಣಿಪುರ ತಲಾ ಒಂದು ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಏತನ್ಮಧ್ಯೆ, ಭಾರತವು ಕಳೆದ 24 ಗಂಟೆಗಳಲ್ಲಿ 1,79,723 ಹೊಸ COVID-19 ಪ್ರಕರಣಗಳನ್ನು ವರದಿ ಮಾಡಿದ್ದು ಸಕ್ರಿಯ ಪ್ರಕರಣಗಳು ಪ್ರಸ್ತುತ 7,23,619ಕ್ಕೇರಿದೆ.

See also  ಕೋವಿಶೀಲ್ಡ್ 2ನೇ ಡೋಸ್ ಅವಧಿ 8-12 ವಾರದ ನಡುವೆ ನೀಡಲು ಶಿಫಾರಸ್ಸು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು