News Kannada
Friday, October 07 2022

ದೆಹಲಿ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2.85 ಲಕ್ಷ ಹೊಸ ಕೇಸ್ ಪತ್ತೆ - 1 min read

Photo Credit :

ನವದೆಹಲಿ:  ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,85,914 ಹೊಸ ಕೇಸ್ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 665 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 40,085,116ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,23,018ಕ್ಕೆ ತಲುಪಿದೆ.ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,91,127ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,67,753 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,70,71,898ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 16,49,108 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 71,88,02,433 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,62,92,09,308 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

See also  ಕೊರೋನಾ : ಮೃತಪಟ್ಟವರಿಗೆ 4 ಲಕ್ಷ ರೂ. ಪರಿಹಾರಕ್ಕೆ ಕಾಂಗ್ರೆಸ್ ಆನ್ ಲೈನ್ ಅಭಿಯಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು