उत्तर प्रदेश विधानसभा चुनाव में आज वोटिंग का चौथा दौर है। सभी मतदाताओं से मेरा आग्रह है कि वे अपने बहुमूल्य वोट का प्रयोग कर लोकतंत्र को मजबूत करने में अपना योगदान करें।
— Narendra Modi (@narendramodi) February 23, 2022
ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ನಾಲ್ಕನೇ ಹಂತದ ಮತದಾನ ಆರಂಭವಾಗಿದ್ದು, ಮತದಾನದ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು ಕೊಡುಗೆ ನೀಡುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಇಂದು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಎಲ್ಲಾ ಮತದಾರರು ತಮ್ಮ ಅಮೂಲ್ಯವಾದ ಮತಗಳನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು ತಮ್ಮ ಕೊಡುಗೆ ನೀಡಬೇಕೆಂದು ನಾನು ವಿನಂತಿಸುತ್ತೇನೆ’ ಎಂದು ಹೇಳಿದ್ದಾರೆ.