News Kannada
Friday, December 02 2022

ದೆಹಲಿ

ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅಧಿಕೃತವಾಗಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

Photo Credit :

ನವದೆಹಲಿ : ನಿವೃತ್ತ ಐಪಿಎಸ್  ಅಧಿಕಾರಿ ಭಾಸ್ಕರ್ ರಾವ್ ಅವರು ಇಂದು ನವದೆಹಲಿಯಲ್ಲಿ ಅಧಿಕೃತವಾಗಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ.

ಪಕ್ಷದ ಚಿಹ್ನೆ ಹೊಂದಿರುವ ಶಾಲು ಧರಿಸಿ, ಆಪ್ ಎಂಬ ಗಾಂಧಿ ಟೋಪಿ ಧರಿಸಿ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ.

ದೆಹಲಿಯ ಕಛೇರಿಯಲ್ಲಿ ಭಾಸ್ಕರ್ ರಾವ್ ಜತೆ ದಲೀಪ್ ಪಾಂಡೆ, ಪೃಥ್ವಿ ರೆಡ್ಡಿ, ಸಂಚಿತ್ ಸ್ವಾನೆ, ಅರವಿಂದ್, ವಿಜಯ್ ಶಾಸ್ತ್ರಿಮಠ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಟ್ವೀಟ್ ಮೂಲಕ ಮಾಹಿತಿ:

ಪೊಲೀಸ್ ಅಧಿಕಾರಿ ಆಗಿ ವೃತ್ತಿಜೀವನ ಅಂತ್ಯಗೊಂಡಿರುವ ಹಾಗೂ ರಾಜಕೀಯ ಸೇರ್ಪಡೆ ಕುರಿತು ನಿನ್ನೆಯಷ್ಟೇ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದರು. 32 ವರ್ಷಗಳ ಐಪಿಎಸ್ ಜೀವನಕ್ಕೆ ತೆರೆ ಎಳೆಯುತ್ತಿದ್ದೇನೆ. ನನ್ನ ಕುಟುಂಬಕ್ಕೆ, ಗೆಳೆಯರಿಗೆ, ಸಹೋದ್ಯೋಗಿಗಳಿಗೆ, ಹಿರಿ, ಕಿರಿಯರಿಗೆ, ಪಕ್ಷಾತೀತವಾಗಿ ಕರ್ನಾಟಕದ ಸರ್ಕಾರಗಳಿಗೆ ಧನ್ಯವಾದಗಳು ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದರು.

ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಪ್ ನಿಂದ ಭಾಸ್ಕರ್ ರಾವ್ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.

See also  ಇಂದಿನಿಂದ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕ್ವಾರಂಟೈನ್ ಇಲ್ಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು