News Kannada
Sunday, September 25 2022

ದೆಹಲಿ

ಭೂಮಿ ತಾಯಿಗೆ ಕರುಣೆಗಾಗಿ ಕೃತಜ್ಞತೆ ಸಲ್ಲಿಸಲು ಭೂಮಿ ದಿನ ಆಚರಣೆ: ನರೇಂದ್ರ ಮೋದಿ - 1 min read

Photo Credit :

ನವದೆಹಲಿ: ಭೂಮಿ ದಿನವು ‘ಭೂಮಿ ತಾಯಿ’ಯ ಕರುಣೆಗಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸುವುದು ಮತ್ತು ಈ ಗ್ರಹದ ಕಾಳಜಿಗೆ ಪ್ರತಿಯೊಬ್ಬರ ಬದ್ಧತೆಯನ್ನು ಪುನರುಚ್ಚರಿಸುವುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ವಿಶ್ವ ಭೂಮಿಯ ದಿನದಂದು ಪರಿಸರ ಸಮಸ್ಯೆಗಳ ಕುರಿತಂತೆ ಚರ್ಚಿಸಲು ಲಕ್ಷಾಂತರ ಜನರು ಒಟ್ಟಿಗೆ ಸೇರುತ್ತಾರೆ.ಪರಿಸರವನ್ನು ಸಂರಕ್ಷಿಸುವುದು ಪ್ರತಿ ಪೀಳಿಗೆಯ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

ಜಾಗತಿಕ ತಾಪಮಾನ ಏರಿಕೆ, ಮಾಲಿನ್ಯ ಹೆಚ್ಚಳ ಇವೇ ಮುಂತಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮತ್ತು ಸಮಕಾಲೀನ ಹಾಗೂ ಹೊಸ ಪೀಳಿಗೆಯಲ್ಲಿ ಜಾಗೃತಿ ಮೂಡಿಸುವ ಉದ್ದೇಶವನ್ನು ಈ ದಿನ ಒಳಗೊಂಡಿದೆ.

ಪರಿಸರ ಸಂರಕ್ಷಣೆಯ ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಏಪ್ರಿಲ್ 22 ರಂದು ಭೂಮಿ ದಿನವನ್ನು ಆಚರಿಸಲಾಗುತ್ತದೆ. ಹೀಗಾಗಿ ಈ ದಿನ ಪ್ರಪಂಚದಾದ್ಯಂತ ಮಹತ್ವ ಪಡೆದುಕೊಂಡಿದೆ.

ಪರಿಸರದ ಬಗ್ಗೆ ಭಾರತದ ಸಾಂಪ್ರದಾಯಿಕ ಕ್ರಮಗಳ ಕುರಿತು ಮಾತನಾಡಿರುವ ತಮ್ಮ ಹಿಂದಿನ ಭಾಷಣಗಳನ್ನು ಒಳಗೊಂಡಿರುವ ವಿಡಿಯೊ ಕ್ಲಿಪ್ ಅನ್ನು ಮೋದಿ ಪೋಸ್ಟ್ ಮಾಡಿದ್ದಾರೆ.

ಈ ದಿನದ ಹೆಸರಲ್ಲಿ ವಿವಿಧ ಹವಾಮಾನ ಸಮಸ್ಯೆಗಳ ಬಗ್ಗೆ ಜನರಿಗೆ ಶಿಕ್ಷಣ ನೀಡಲು, ಪರಿಸರ ಸಾಕ್ಷರತೆಯ ವಿಷಯಗಳ ಕುರಿತು ಚರ್ಚೆಗಳನ್ನು ನಡೆಸಲು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

See also  ಸ್ಟಾರ್ಟ್‌ಅಪ್‌ಗಳಿಗೆ ನೀಡುವ ಪ್ರಶಸ್ತಿಯಲ್ಲಿ ಕರ್ನಾಟಕಕ್ಕೆ ಸಿಂಹ ಪಾಲು; ಅಶ್ವಥ್ ನಾರಾಯಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು