ನವದೆಹಲಿ : ಬಿಜೆಪಿ ಎಲ್ಲಾ ಚುನಾವಣೆಗಳಿಗೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಕಾನೂನು ಇಲಾಖೆಗೆ ಹಾಗೂ ಅಡ್ವೊಕೇಟ್ ಜನರಲ್ ಅವರಿಗೆ ಸಂಪೂರ್ಣ ಅಧ್ಯಯನ ಮಾಡುವಂತೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನವದೆಹಲಿಯಲ್ಲಿ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು ಸಿಎಂ, “”ಸರ್ವೋಚ್ಚ ನ್ಯಾಯಾಲಯದ ಆದೇಶ ಪ್ರತಿ ನಮಗೆ ಬಂದಿಲ್ಲ, ಸರ್ವೋಚ್ಚ ನ್ಯಾಯಾಲಯ ಚುನಾವಣಾ ಆಯೋಗ ಏನು ತೀರ್ಮಾನ ಮಾಡುತ್ತದೋ ಅದನ್ನು ಪಾಲಿಸಲಾಗುವುದು. ಸರ್ವೋಚ್ಛ ನ್ಯಾಯಾಲಯದ ಆದೇಶ ಎಲ್ಲಾ ರಾಜ್ಯಗಳಿಗೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಅನ್ವಯವಾಗುತ್ತದೆ. ಚುನಾವಣಾ ಆಯೋಗದೊಂದಿಗೆ ಚರ್ಚೆ ಮಾಡಲಾಗುವುದು. ಅವರು ಸೂಚಿಸಿದಂತೆ ಕ್ರಮ ವಹಿಸಲಾಗುವುದು” ಎಂದರು.
ಬಿಬಿಎಂಪಿ ಚುನಾವಣೆಗೆ ಸಿದ್ಧ
ಬಿಬಿಎಂಪಿ ಚುನಾವಣೆಗೆ ಇನ್ನೆರಡು ದಿನಗಳಲ್ಲಿ ನೋಟಿಫಿಕೇಷನ್ ಹೊರಡಿಸಿಬೇಕೆಂದು ಸುಪ್ರೀಂ ಕೋರ್ಟ್ನ ತ್ರಿ ಸದಸ್ಯ ಪೀಠ ಆದೇಶವನ್ನು ಹೊರಡಿಸಿದೆ. ಸಿಎಂ ಬಸವಾರಾಜ ಬೊಮ್ಮಾಯಿಯವರು ಚುನಾವಣೆಗೆ ಸರ್ಕಾರ ಸಿದ್ದವಿದೆ ಎಂದು ಹೇಳಿದ್ದಾರೆ. ಆದರೆ ಚುನಾವಣಾ ಆಯೋಗ ಯಾವ ತೀರ್ಮಾನ ಕೈಗೊಳ್ಳುತ್ತೆ ಎಂದು ಕಾದು ನೋಡಿ ಕ್ರಮ ವಹಿಸಲಾಗುವುದು ಎಂದಿದ್ದಾರೆ.
ಬಿಬಿಪಿಎಂ, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗೆ ಬಿಜೆಪಿ ಸಿದ್ದವಿದೆಯೇ ಎಂದು ಕಾಂಗ್ರೆಸ್ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, “”ಕಾಂಗ್ರೆಸ್ ಪಕ್ಷ ಅವರದ್ದನ್ನು ಅವರು ನೋಡಿಕೊಳ್ಳಬೇಕು. ಸಭೆಗಳಲ್ಲಿ ಬಡಿದಾಡಿಕೊಂಡು ಬಂದಿದ್ದಾರೆ. ನಾವು ಇಡೀ ರಾಜ್ಯ ಸುತ್ತಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ತಯಾರಿ ಮಾಡಿದ್ದೆವು. ಬಿಬಿಎಂಪಿಯಲ್ಲಿಯೂ ಸಭೆಗಳನ್ನು ಮಾಡಿದ್ದೇವೆ. ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಅಧ್ಯಯನ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು,” ಎಂದರು.