News Kannada
Monday, February 06 2023

ದೆಹಲಿ

ಎರಡನೇ ಜಾಗತಿಕ ಕೋವಿಡ್ ಸಮಾವೇಶದಲ್ಲಿ ಮೋದಿ, ಜೋ ಬೈಡನ್ ಭಾಗಿ

Photo Credit :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮೇ 12) ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಆಹ್ವಾನದ ಮೇರೆಗೆ ಎರಡನೇ ಜಾಗತಿಕ ಕೋವಿಡ್ ಸಮಾವೇಶದ ವರ್ಚುವಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಭೆ ಭಾರತೀಯ ಕಾಲಮಾನ ಬೆಳಿಗ್ಗೆ 10 ಗಂಟೆ ನಂತರ ಆರಂಭವಾಗುವ ನಿರೀಕ್ಷೆ ಇದೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ. ನರೇಂದ್ರ ಮೋದಿ ಕಳೆದ 2022 ರ ಸೆಪ್ಟೆಂಬರ್ 22 ರಂದು ನಡೆದಿದ್ದ ಮೊದಲ ಜಾಗತಿಕ ಕೋವಿಡ್ ಸಮಾವೇಶದಲ್ಲೂ ಪಾಲ್ಗೊಂಡಿದ್ದರು.

ಎರಡನೇ ಜಾಗತಿಕ ಕೋವಿಡ್ ಸಮಾವೇಶದಲ್ಲಿ ಕೋವಿಡ್‌ ರೂಪಾಂತರಿಗಳಿಂದ ಎದುರಾಗಿರುವ ಹೊಸ ಸವಾಲುಗಳನ್ನು ಹೇಗೆ ಎದುರಿಸುವುದು ಹಾಗೂ ವಿಶ್ವ ಆರೋಗ್ಯ ರಕ್ಷಣೆಗೆ ಮಾಡಬೇಕಿರುವ ತುರ್ತು ಕೆಲಸಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.

ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನಾ ಭಾಷಣ ಮಾಡಲಿದ್ದು, ಸಾಂಕ್ರಾಮಿಕ ತಡೆ ಕುರಿತ ಸಿದ್ಧತೆಗಳ ಬಗ್ಗೆ ಮಾತನಾಡಲಿದ್ದಾರೆ. ಈ ಸಭೆಯಲ್ಲಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರೂ ಕೂಡ ಭಾಗವಹಿಸಲಿದ್ದಾರೆ.

ಏತನ್ಮಧ್ಯೆ ದೇಶದಲ್ಲಿ ಬುಧವಾರ 2,505 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 52 ಜನ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ. ಇದುವರೆಗೆ ಭಾರತದಲ್ಲಿ 5,22,864 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

See also  ಸತತ ಮೂರನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತಲಾ 35 ಪೈಸೆ ಏರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು