News Kannada
Tuesday, February 07 2023

ದೆಹಲಿ

ಗುರುಗ್ರಾಮ್​ನಲ್ಲಿ ಕತ್ತು ಸೀಳಿ ಅರ್ಚಕನ ಬರ್ಬರ ಹತ್ಯೆ

Photo Credit :

ನವದೆಹಲಿ: ಗುರುಗ್ರಾಮ್ ಸೆಕ್ಟರ್ 65 ರ ಕದರ್‌ಪುರ್ ಗ್ರಾಮದಲ್ಲಿ 85 ವರ್ಷದ ದೇವಸ್ಥಾನದ ಅರ್ಚಕನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಮೃತರನ್ನು ಗೋವಿಂದ್ ದಾಸ್ (85) ಎಂದು ಗುರುತಿಸಲಾಗಿದ್ದು, ಕಳೆದ 35 ವರ್ಷಗಳಿಂದ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಬೆಳಗ್ಗೆ ಆ ಪ್ರದೇಶದ ನಿವಾಸಿಗಳು ದೇವಸ್ಥಾನಕ್ಕೆ ಪೂಜೆಗಾಗಿ ತೆರಳಿದ್ದ ವೇಳೆ ದೇವಸ್ಥಾನದ ಅರ್ಚಕ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೂಡಲೇ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ವಿಧಿವಿಜ್ಞಾನ ತಜ್ಞರೊಂದಿಗೆ ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

ಅಪರಿಚಿತ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಕತ್ತು ಸೀಳಿ ಪಾದ್ರಿಯನ್ನು ತಡರಾತ್ರಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಈ ನಡುವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

See also  ಗೃಹಿಣಿಯ ಕೊಲೆ ಪ್ರಕರಣ,ಅಪ್ರಾಪ್ತ ಬಾಲಕ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು