News Kannada
Monday, February 06 2023

ದೆಹಲಿ

ಕೆರೆಬಿಯನ್ ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡ ರಾಷ್ಟ್ರಪತಿ

Photo Credit :

 ನವದೆಹಲಿ : ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಪತ್ನಿ ಸವಿತಾ ಕೋವಿಂದ್ ಅವರೊಂದಿಗೆ ಇಂದು ಜಮೈಕಾ ಮತ್ತು ಸೇಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್‌ಗೆ ಪ್ರವಾಸ ಕೈಗೊಂಡಿದ್ದಾರೆ.

ರಾಷ್ಟ್ರಪತಿಗಳು ಮೇ 15 ರಿಂದ 21 ರವರೆಗೆ ಏಳು ದಿನಗಳ ಕಾಲ ಜಮೈಕಾ ಮತ್ತು ಸೇಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್‌ಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಜಮೈಕಾದ ಗವರ್ನರ್ ಜನರಲ್ ಸರ್ ಪ್ಯಾಟ್ರಿಕ್ ಅಲೆನ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಲಿದ್ದಾರೆ.

ನಂತರ ಪ್ರಧಾನ ಮಂತ್ರಿ ಆಂಡ್ರ್ಯೂ ಹೋಲ್ನೆಸ್ ಮತ್ತು ಇತರ ಗಣ್ಯರನ್ನು ಭೇಟಿಯಾಗಲಿದ್ದಾರೆ. ಜಮೈಕಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಅವರು ಭಾಷಣ ಮಾಡಲಿದ್ದಾರೆ. ಕೆರಬಿಯಾನ್​ ರಾಷ್ಟ್ರಗಳಿಗೆ ರಾಷ್ಟ್ರಪತಿಗಳು ಇದೇ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ.

ಭಾರತ ಮತ್ತು ಜಮೈಕಾ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 60 ನೇ ವಾರ್ಷಿಕೋತ್ಸವ 2022 ಆಗಿರುವುದರಿಂದ ಈ ಭೇಟಿಯು ಮಹತ್ವದ ಮೈಲಿಗಲ್ಲಾಗಿದೆ.

ಕೋವಿಂದ್ ಅವರು ಇದೇ ತಿಂಗಳ 18 ರಿಂದ 21 ರವರೆಗೆ ಸೇಂಟ್ ವಿನ್ಸೆಂಟ್ & ಗ್ರೆನಡೈನ್ಸ್ (SVG) ಗೆ ಭೇಟಿ ನೀಡಲಿದ್ದಾರೆ ಮತ್ತು ಅಲ್ಲಿನ ಗವರ್ನರ್ ಜನರಲ್ ಸುಸಾನ್ ಡೌಗನ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಪ್ರಧಾನಿ ಡಾ. ರಾಲ್ಫ್ ಗೊನ್ಸಾಲ್ವಿಸ್ ಮತ್ತು ಇತರ ಗಣ್ಯರನ್ನು ಭೇಟಿಯಾಗಲಿದ್ದಾರೆ. ಅಲ್ಲಿನ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ರಾಷ್ಟ್ರಪತಿ ಕೋವಿಂದ್ ಅವರು ದ್ವೀಪ ರಾಷ್ಟ್ರದಲ್ಲಿರುವ ಮಹತ್ವದ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಉಭಯ ದೇಶಗಳ ನಡುವೆ ಹಲವಾರು ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷಿಸಲಾಗಿದೆ.

See also  ಸ್ವಿಗ್ಗಿ, ಜೊಮ್ಯಾಟೊ ಕಂಪನಿಗಳ ವಿರುದ್ಧ ತನಿಖೆಗೆ ಸಿಸಿಐ ಆದೇಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು