ದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,487 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು 13 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.
ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ದೇಶದಲ್ಲಿ ಒಟ್ಟೂ 17,692 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು ದೈನಂದಿನ ಪಾಸಿಟಿವಿಟಿ ಪ್ರಮಾಣವು 0.61% ದಷ್ಟು ದಾಖಲಾಗಿದೆ.
ಚೇತರಿಕೆ ದರವು 98.74% ದಷ್ಟಿದ್ದು ಕಳೆದ 24 ಗಂಟೆಗಳಲ್ಲಿ 2,878 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ದೇಶದಾದ್ಯಂತ ಒಟ್ಟೂ 191.32 ಕೋಟಿ ಲಸಿಕೆ ವಿತರಿಸಲಾಗಿದೆ.