News Kannada
Friday, February 03 2023

ದೆಹಲಿ

ಮೋದಿ ದೇಶದ ಪ್ರತಿಯೊಂದು ವರ್ಗದ ಬಗ್ಗೆ ಕಾಳಜಿವಹಿಸುವ ಸಂವೇದನಾಶೀಲ ನಾಯಕ: ಅಮಿತ್ ಶಾ

Amit Shah inaugurates itbp's new buildings in Bengaluru
Photo Credit :

ನವದೆಹಲಿ: ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕವನ್ನು ಪ್ರತಿ ಲೀಟರಿಗೆ ಕ್ರಮವಾಗಿ ₹8 ಮತ್ತು ₹6 ಕಡಿತ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಗೃಹ ಸಚಿವ ಅಮಿತ್ ಶಾ ಸ್ವಾಗತಿಸಿದ್ದಾರೆ.

ಸವಾಲಿನ ಜಾಗತಿಕ ಪರಿಸ್ಥಿತಿಯ ನಡುವೆಯೂ ನರೇಂದ್ರ ಮೋದಿ ಸರ್ಕಾರ ಜನರಿಗೆ ದೊಡ್ಡ ನಿರಾಳತೆ ಒದಗಿಸಿದೆ.  ಪ್ರಧಾನಿ ನರೇಂದ್ರ ಮೋದಿ ಅವರೊಬ್ಬರ ಸಂವೇದನಾಶೀಲ ನಾಯಕ ಎಂದು ಅವರು ಬಣ್ಣಿಸಿದ್ದಾರೆ.

ಎಕ್ಸೈಸ್‌ ಸುಂಕ ಇಳಿಕೆ ಕುರಿತು ಟ್ವೀಟ್ ಮಾಡಿರುವ ಅಮಿತ್ ಶಾ, ‘ಮೋದಿ ದೇಶದ ಪ್ರತಿಯೊಂದು ವರ್ಗದ ಬಗ್ಗೆ ಕಾಳಜಿ ವಹಿಸುವ ಸಂವೇದನಾಶೀಲ ನಾಯಕ. ಹಾಗಾಗಿ ಕಳೆದ 8 ವರ್ಷಗಳಿಂದ ದೇಶದ ಬಡವರು, ರೈತರು, ಜನಸಾಮಾನ್ಯರ ಹಿತಾಸಕ್ತಿ ಹಾಗೂ ಕಾಳಜಿಯೇ ಮೋದಿ ಸರ್ಕಾರದ ನಿರ್ಧಾರಗಳ ಕೇಂದ್ರಬಿಂದುವಾಗಿದೆ. ಈ ಜನಸ್ನೇಹಿ ನಿರ್ಧಾರಕ್ಕಾಗಿ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನಾನು ಆಭಾರಿಯಾಗಿದ್ದೇನೆ’ ಎಂದು ಉಲ್ಲೇಖಿಸಿದ್ದಾರೆ.

ಹಣದುಬ್ಬರ ನಿಯಂತ್ರಿಸಲು ಮತ್ತು ಅಗತ್ಯ ವಸ್ತುಗಳ ದರ ಏರಿಕೆ ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕವನ್ನು ಶನಿವಾರ ಪ್ರತಿ ಲೀಟರಿಗೆ ಕ್ರಮವಾಗಿ ₹8 ಮತ್ತು ₹6 ಕಡಿತ ಮಾಡಿದೆ. ಅದೇ ರೀತಿ, ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ ₹ 200 ಸಬ್ಸಿಡಿಯನ್ನು ನೀಡಲಾಗುವುದು ಎಂದು ಘೋಷಿಸಿದೆ.

See also  ಚನ್ನಿ ಮೇಲೆ ಒತ್ತಡ ಹೇರಲು ಭೂಪಿಂದರ್ ಸಿಂಗ್ ಹನಿ ಅವರನ್ನು ಇ.ಡಿ ಬಂಧಿಸಿದೆ; ಮಲ್ಲಿಕಾರ್ಜುನ ಖರ್ಗೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು