News Kannada
Tuesday, February 07 2023

ದೆಹಲಿ

ಮಳೆ ಆರ್ಭಟ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

Photo Credit :

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ ರಾತ್ರಿ ಹಾಗೂ ಇಂದು ಮುಂಜಾನೆಯಿಂದ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಜನ, ವಾಹನ ಸಂಚಾರಕ್ಕೆ ತೊಡಕಾಗಿದೆ. ವಿಮಾನ ಸಂಚಾರದಲ್ಲೂ ವ್ಯತ್ಯಯವಾಗಿದೆ. ‘ಪ್ರತಿಕೂಲ ಹವಾಮಾನದ ಕಾರಣ ವಿಮಾನ ನಿಲ್ದಾಣದ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ವಿಮಾನ ಸಂಚಾರದ ಕೊನೆ ಕ್ಷಣದ ಮಾಹಿತಿಗಾಗಿ ಪ್ರಯಾಣಿಕರು ವಿಮಾನಯಾನ ಸಂಸ್ಥೆಗಳ ಜತೆ ಸಂಪರ್ಕದಲ್ಲಿರಿ’ ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್‌ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ಗಾಜಿಯಾಬಾದ್, ಹಿಂಡನ್ ವಾಯುನೆಲೆ, ನೋಯ್ಡಾ, ಗ್ರೇಟರ್ ನೋಯ್ಡಾ, ಗುರುಗ್ರಾಮ ಸೇರಿದಂತೆ ಹಲವೆಡೆ ಗುಡುಗುಸಹಿತ ಭಾರಿ ಮಳೆ ಮುಂದುವರಿಯಲಿದೆ ಎಂದು ಸೋಮವಾರ ಮುಂಜಾನೆ ಭಾರತೀಯ ಹವಾಮಾನ ಇಲಾಖೆ ಟ್ವೀಟ್ ಮಾಡಿದೆ. ನಗರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ ಎನ್ನಲಾಗಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ರಸ್ತೆ ಸಂಚಾರಕ್ಕೆ ಸಮಸ್ಯೆಯಾಗಿದೆ.

ನಗರ ಮತ್ತು ರಾಜಧಾನಿ ಸಮೀಪದ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಮತ್ತು ಗಂಟೆಗೆ 60-90 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

See also   ಚಂಡಮಾರುತ ಪ್ರಭಾವ : ಕರಾವಳಿ ತೀರ ಪ್ರದೇಶಗಳಲ್ಲಿ ಜನರ ತೆರವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು