ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,248 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸಾವಿನ ಸಂಖ್ಯೆಯಲ್ಲಿ ಕಳೆದ 24 ಗಂಟೆಯಲ್ಲಿ 13 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,903 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 81,687 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 9,862 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,27,25,055 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 12,28,291 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,96,45,99,906 ಡೋಸ್ ಲಸಿಕೆ ಹಾಕಲಾಗಿದೆ.