ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 18,840 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಕಳೆದ 24 ಗಂಟೆಯಲ್ಲಿ 43 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 525386 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,25,028 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 16,104 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,29,53,980 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 12,26,795 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,98,65,36,288 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,54,778 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
#COVID19 | India reports 18,840 fresh cases, 16,104 recoveries, and 43 deaths in the last 24 hours.
Active cases 1,25,028
Daily positivity rate 4.14% pic.twitter.com/YLiCI8DHlv— ANI (@ANI) July 9, 2022