News Kannada
Monday, October 02 2023
ದೆಹಲಿ

ದೆಹಲಿ: ಇಂದು ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಆರಂಭ

New Delhi: The counting of votes for the Presidential election slated to begin at 11 am today.
Photo Credit : Wikimedia

ದೆಹಲಿ: ಇಂದು ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಆರಂಭವಾಗಲಿದ್ದು, ಆಯ್ಕೆಯಾದ ಅಭ್ಯರ್ಥಿ ಭಾರತದ 15ನೇ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಆಡಳಿತದಲ್ಲಿರುವ ಬಿಜೆಪಿಯ ಸಂಖ್ಯಾಬಲ ಹೆಚ್ಚಿದ್ದು ಮುರ್ಮುಅವರ ಗೆಲುವು ಬಹುತೇಕ ಖಚಿತ ಎನ್ನಲಾಗುತ್ತಿದೆ. ಜಾರ್ಖಂಡ್‌ನ ಮಾಜಿ ಗವರ್ನರ್ ಆಗಿರುವ ದ್ರೌಪದಿ ಮುರ್ಮು ಅವರು ಆಯ್ಕೆಯಾದರೆ, ಭಾರತದ ಮೊದಲ ಬುಡಕಟ್ಟು ರಾಷ್ಟ್ರಪತಿ ಮತ್ತು ದೇಶದ ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಲಿದ್ದಾರೆ.

ಜುಲೈ 18 ರಂದು ದೇಶಾದ್ಯಂತ ಎಲ್ಲಾ ಚುನಾಯಿತ ಶಾಸಕರು ಮತ್ತು ಸಂಸದರು ರಾಮ್ ನಾಥ್ ಕೋವಿಂದ್ ಅವರ ಉತ್ತರಾಧಿಕಾರಿಗೆ ಮತ ಹಾಕಿದ್ದರು. ಸಂಸತ್ ಭವನದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ 736 ಮತದಾರರಲ್ಲಿ 728 ಮತದಾರರು ಮತ ಚಲಾಯಿಸಿದ್ದಾರೆ. ಸಂಸತ್ ಭವನದಲ್ಲಿ ಒಟ್ಟು ಶೇ.98.91 ಮತದಾನವಾಗಿದೆ.

See also  ಬಂಟ್ವಾಳ: ಕೈಗಾರಿಕಾ ತರಬೇತಿ ಸಂಸ್ಥೆಗಳು ದೇಶಕ್ಕೆ ಶಕ್ತಿ ತುಂಬುತ್ತಿದೆ- ಅಶ್ವತ್ಥನಾರಾಯಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು