ದೆಹಲಿ: ಎಲ್ಲರ ನಿರೀಕ್ಷೆಯಂತೆ ಕೊನೆಗೂ ಭಾರತದ 15ನೇ ರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಕಂಡಿದ್ದು, ಜುಲೈ 25 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳಲಿದೆ. ದ್ರೌಪದಿ ಮುರ್ಮು ಅವರು ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ವ್ಯಕ್ತಿಯಾಗಿದ್ದಾರೆ.
ದೇಶದ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಟ್ವಿಟರ್‌ನಲ್ಲೂ ಶುಭಾಶಯ ತಿಳಿಸಿರುವ ಪ್ರಧಾನಿ ಮೋದಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.
Prime Minister Narendra Modi congratulated NDA's #DroupadiMurmu on being declared the President of India, at her residence in Delhi pic.twitter.com/sAly5YwU4C
— ANI (@ANI) July 21, 2022
ಈ ಬಗ್ಗೆ ಟ್ವೀಟ್ ಮಾಡಿರುವಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಭಾರತದ ರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಆಯ್ಕೆಯಾಗಿ ಹೊಸ ದಾಖಲೆ ಬರೆದ ದ್ರೌಪದಿ ಮುರ್ಮು ಅವರಿಗೆ ಹಾರ್ದಿಕ ಅಭಿನಂದನೆಗಳು. ಸಮಾಜದ ಕೆಳಸ್ತರದಿಂದ ಬಂದು ರಾಷ್ಟ್ರದ ಪರಮೋನ್ನತ ಹುದ್ದೆಯನ್ನು ಅವರು ಅಲಂಕರಿಸುತ್ತಿರುವುದು ನಮ್ಮ ಪ್ರಜಾಪ್ರಭುತ್ವದ ಯಶಸ್ಸಿನ ಸಂಕೇತ ಎಂದು ಬರೆದುಕೊಂಡಿದ್ದಾರೆ.
ಭಾರತದ ರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಆಯ್ಕೆಯಾಗಿ ಹೊಸ ದಾಖಲೆ ಬರೆದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹಾರ್ದಿಕ ಅಭಿನಂದನೆಗಳು. ಸಮಾಜದ ಕೆಳಸ್ತರದಿಂದ ಬಂದು ರಾಷ್ಟ್ರದ ಪರಮೋನ್ನತ ಹುದ್ದೆಯನ್ನು ಅವರು ಅಲಂಕರಿಸುತ್ತಿರುವುದು ನಮ್ಮ ಪ್ರಜಾಪ್ರಭುತ್ವದ ಯಶಸ್ಸಿನ ಸಂಕೇತ.
1/2 pic.twitter.com/3S8UQpLJSQ— Basavaraj S Bommai (@BSBommai) July 21, 2022