ನವದೆಹಲಿ: ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ನಡೆಯಲಿರುವ ಸಮಾರಂಭದಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಇಂದು ಭೇಟಿ ನೀಡಲಿದ್ದಾರೆ.
ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರೊಂದಿಗೆ ಆಗಮಿಸಲಿರುವ ಸಿಂಗ್, ಜಮ್ಮು ವಿಶ್ವವಿದ್ಯಾಲಯದ ಬಳಿ ಇರುವ ಗುಲ್ಶಾನ್ ಮೈದಾನದಲ್ಲಿ ನಡೆಯುವ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ನಡೆಯುವ ಮೂರು ದಿನಗಳ ಸಮಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಹಲವು ಕಾರ್ಯಕ್ರಮಗಳು ನಡೆಯಲಿದ್ದು, ಸೇನೆ, ನಾಗರಿಕ ಆಡಳಿತದ ಗಣ್ಯರು, ಶೌರ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ಅವರ ಕುಟುಂಬದವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಭಾರತೀಯ ಸೇನೆಯೂ ಸಿದ್ಧತೆ ನಡೆಸಿದೆ.
‘ಕಾರ್ಗಿಲ್ ವಿಜಯ ದಿವಸದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಾಳೆ, ಜುಲೈ 24ರಂದು ಜಮ್ಮುವಿಗೆ ಭೇಟಿ ನೀಡಲಿದ್ದೇನೆ’ ಎಂದು ಅವರು ಶನಿವಾರ ಟ್ವೀಟ್ ಮಾಡಿದ್ದರು.
Tomorrow, 24th July, I shall be visiting Jammu to attend a programme commemorating ‘Kargil Vijay Diwas’. Looking forward to it.
— Rajnath Singh (@rajnathsingh) July 23, 2022