ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 20,409 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
24 ಗಂಟೆಯಲ್ಲಿ 47 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,258ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 1,43,988 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.48ರಷ್ಟು ಜನಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,33,09,484 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 38,63,960 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,03,60,46,307 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,98,761 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
India reports 20,409 new COVID19 cases today; Active caseload at 1,43,988 pic.twitter.com/3YYULK8bZJ
— ANI (@ANI) July 29, 2022