News Kannada
Saturday, September 24 2022

ದೆಹಲಿ

ಮಣಿಪುರ : ಗಲಭೆ ನಿಯಂತ್ರಣಕ್ಕೆ 5 ದಿನ ಇಂಟರ್ನೆಟ್ ಸಂಪೂರ್ಣ ಬಂದ್ - 1 min read

Internet shut down for 5 days to control riots
Photo Credit : News Kannada

ಮಣಿಪುರ : ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಣಿಪುರ ಸರ್ಕಾರ ರಾಜ್ಯದಾದ್ಯಂತ ಮುಂದಿನ ಐದು ದಿನಗಳ ಕಾಲ ಇಂಟರ್ನೆಟ್ ಸ್ಥಗಿತಗೊಳಿಸಿದೆ.

ಬಿಷ್ಟುಪುರ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸಂಘಟನೆಯೊಂದು ಕರೆ ನೀಡಿದ್ದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಗೃಹ ಇಲಾಖೆ ಆಯುಕ್ತ ಎಚ್. ಜ್ಞಾನ ಪ್ರಕಾಶ್, ಕೆಲ ಕಿಡಿಗೇಡಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿನ್ನೆಲೆ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುನ್ನಚ್ಚರಿಕಾ ಕ್ರಮವಾಗಿ ಇಂಟನರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಶನಿವಾರ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ವಾಹನವೊಂದನ್ನು ಸುಟ್ಟುಹಾಕಿದ್ದರು. ಘಟನೆಯ ವಿಡಿಯೊ ಮತ್ತು ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಇದನ್ನೇ ಅಸ್ತ್ರವಾಗಿಸಿಕೊಂಡ ಕೆಲವರು ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಣಿಪುರದ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟ (ಎಟಿಎಸ್‌ಯುಎಂ) ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿತ್ತು.

See also  ನವದೆಹಲಿ: 4ನೇ ಮಂಕಿಪಾಕ್ಸ್ ಪ್ರಕರಣ ಪತ್ತೆ, ರಾಷ್ಟ್ರವ್ಯಾಪಿ ಪ್ರಕರಣಗಳ ಸಂಖ್ಯೆ 9 ಕ್ಕೆ ಏರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು