ನವದೆಹಲಿ, ಸೆ.1: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ರಾಷ್ಟ್ರ ರಾಜಧಾನಿಯ ಸಫ್ದರ್‌ಗಂಜ್ ಆಸ್ಪತ್ರೆಯ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಬೆಳಗಿನ ಜಾವ3.30 ರ ಸುಮಾರಿಗೆ ಪೊಲೀಸರಿಗೆ ಘಟನೆಯ ಕರೆ ಬಂದಿದೆ ಎಂದು ಅಧಿಕಾರಿ ಹೇಳಿದರು. ಮೃತರು ಸಫ್ದರ್‌ಗಂಜ್ ಆಸ್ಪತ್ರೆಯಲ್ಲಿ ಇಂಟರ್ನಿಂಗ್ ಮಾಡುತ್ತಿದ್ದರು.
ಆಕೆ ದುಪ್ಪಟ್ಟಾದಿಂದ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಪತ್ತೆಯಾಗಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಯ ತುರ್ತು ವಾರ್ಡ್‌ಗೆ ಕರೆದೊಯ್ಯಲಾಯ್ತು. ಆದ್ರೆ ಅಷ್ಟರಲ್ಲಾಗಲೇ ವಿದ್ಯಾರ್ಥಿನಿ ಮೃತಪಟ್ಟಿದ್ದಳು.
ಆಕೆಯ ವೈಯಕ್ತಿಕ ಡೈರಿ ಮತ್ತು ಕೋಣೆಯಿಂದ ಖಿನ್ನತೆಯ ಔಷಧಿಗಳ ಎರಡು ಪ್ಯಾಕೆಟ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕೆ ಸ್ನೇಹಿತರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿದ್ದಾರೆ. ಆತ್ಮಹತ್ಯೆಯ ಕಾರಣ ಇನ್ನೂ ಅಸ್ಪಷ್ಟವಾಗಿದೆ.