ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮತ್ತೆ 2,401 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,895 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
ದೇಶದಲ್ಲಿ 26,625 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.76ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,73,308 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ ನಿನ್ನೆ 5,02,619 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ಈವರೆಗೆ 2,19,32,18,638 ಡೋಸ್ ಲಸಿಕೆ ಹಾಕಲಾಗಿದೆ.