ಗೃಹ ಸಚಿವ ಅಮಿತ್ ಶಾ ಅವರು ಇಂದು ತಮ್ಮ 58 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೇರದಂತೆ ಹಲವಾರು ಗಣ್ಯರು ಶುಭಾಶಯ ಕೋರಿದ್ದಾರೆ.
“ಭಾರತದ ಗೃಹ ಸಚಿವರಾಗಿ ಅಮಿತ್ ಶಾ ರಾಷ್ಟ್ರದ ಪ್ರಗತಿಗೆ ಹಲವಾರು ಅತ್ಯುತ್ತಮ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.
ಅವರು ದೇಶಸೇವೆಯಲ್ಲಿ ದೀರ್ಘಕಾಲ ತೊಡಗುವಂತಾಗಲಿ ಹಾಗೂ ಅವರು ಆರೋಗ್ಯಕರ ಜೀವನವನ್ನು ನಡೆಸಲಿ” ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
Birthday greetings to Shri @AmitShah Ji. As India’s Home Minister he is making numerous efforts for our nation’s progress. He is also doing commendable work in reforming the important cooperatives sector. May he lead a long and healthy life in service of our nation.
— Narendra Modi (@narendramodi) October 22, 2022
ಹಲವಾರು ಇತರ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಗೃಹಸಚಿವರ ಜನ್ಮದಿನದಂದು ಶುಭಾಶಯ ಕೋರಿದ್ದಾರೆ.
ʼಭಾರತದ ಆಂತರಿಕ ಭದ್ರತೆಯನ್ನು ಬಲಪಡಿಸಲು ಶಾ ಅವರು ಸಮರ್ಪಿತ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ಅವರಿಗೆ ವಹಿಸಲಾದ ಪ್ರತಿಯೊಂದು ಜವಾಬ್ದಾರಿಯನ್ನು ಅವರು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆʼ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದವರಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ಭೂಪೇಂದರ್ ಯಾದವ್ ಕೂಡ ಸೇರಿದ್ದಾರೆ.