ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,321 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,57,149 ಕ್ಕೆ ಏರಿಕೆಯಾಗಿದೆ.ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 16,098 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇಂದು ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, 9 ಮಂದಿ ಸಾವಿಗೀಡಾಗಿದ್ದು, ಈವರೆಗೆ 5,30,461 ಜನರು ಸೋಂಕಿನಿಂದ ಸಾವನಪ್ಪಿದ್ದಾರೆ.
ದೇಶದಲ್ಲಿ ಈವರೆಗೂ 219.67 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್ಗಳನ್ನು ವಿತರಿಸಲಾಗಿದೆ.