ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 360 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,70,075ಕ್ಕೆ ತಲುಪಿದೆ.
ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,596ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,046ಕ್ಕೆ ಇಳಿಕೆಯಾಗಿದೆ.
ದೇಶದಲ್ಲಿ ಈ ವರೆಗೆ 4,41,33,433 ಮಂದಿ ಗುಣಮುಖರಾಗಿದ್ದಾರೆ. 90,42,66,334 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಇಲ್ಲಿಯವರೆಗೂ 2,19,87,88,440 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.