ನವದೆಹಲಿ: ದೇಶದಲ್ಲಿ ಕೋವಿಡ್-19 ದೃಢಪಟ್ಟ 291 ಹೊಸ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಹೇಳಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ (140) ಇಳಿಕೆ ಕಂಡುಬಂದಿದೆ. ಸದ್ಯ 5,123 ಪ್ರಕರಣಗಳು ದೇಶದಲ್ಲಿ ಸಕ್ರಿಯವಾಗಿವೆ. ಈ ಪ್ರಮಾಣ ಭಾನುವಾರ 5,263 ಆಗಿತ್ತು.
ಸಚಿವಾಲಯ ಇಂದು ಬೆಳಗ್ಗೆ 8ಕ್ಕೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಇದುವರೆಗೆ ಪತ್ತೆಯಾಗಿರುವ ಪ್ರಕರಣಗಳ ಸಂಖ್ಯೆ 4,46,71,853ಕ್ಕೆ ತಲುಪಿದೆ. ಈ ಪೈಕಿ ಈವರೆಗೆ 4,41,36,116 ಸೋಂಕಿತರು ಚೇತರಿಸಿಕೊಂಡಿದ್ದು, 5,30,614 ಮಂದಿ ಮೃತಪಟ್ಟಿದ್ದಾರೆ.
ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.01 ರಷ್ಟಿದೆ. ಗುಣಮುಖರಾದವರ ಪ್ರಮಾಣ ಶೇ 98.80 ರಷ್ಟು ಇದೆ ಎಂದು ಸಚಿವಾಲಯ ಹೇಳಿದೆ.