News Kannada
Saturday, January 28 2023

ದೆಹಲಿ

ನವದೆಹಲಿ: ದೇಶದಲ್ಲಿ 253 ಹೊಸ ಕೋವಿಡ್-19 ಪ್ರಕರಣಗಳು ದೃಢ

Photo Credit : News Kannada

ವದೆಹಲಿ: ದೇಶದಲ್ಲಿ ಕೋವಿಡ್-19 ದೃಢಪಟ್ಟ 253 ಹೊಸ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.

ಸಚಿವಾಲಯ ಇಂದು ಬೆಳಗ್ಗೆ 8ಕ್ಕೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ (75) ಇಳಿಕೆ ಕಂಡುಬಂದಿದೆ. ಸದ್ಯ 4,597 ಪ್ರಕರಣಗಳು ದೇಶದಲ್ಲಿ ಸಕ್ರಿಯವಾಗಿವೆ. ಈ ಪ್ರಮಾಣ ಶುಕ್ರವಾರ 4,672 ಆಗಿತ್ತು.

ದೇಶದಲ್ಲಿ ಇದುವರೆಗೆ ಪತ್ತೆಯಾಗಿರುವ ಪ್ರಕರಣಗಳ ಸಂಖ್ಯೆ 4,46,73,166ಕ್ಕೆ ತಲುಪಿದೆ. ಈ ಪೈಕಿ ಈವರೆಗೆ 4,41,37,942 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಶುಕ್ರವಾರ ಮೃತಪಟ್ಟಿರುವ ಮೂವರೂ ಸೇರಿ ಸಾವಿನ ಸಂಖ್ಯೆ, 5,30,627ಕ್ಕೆ ಏರಿಕೆಯಾಗಿದೆ.

ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.01 ರಷ್ಟಿದೆ. ಗುಣಮುಖರಾದವರ ಪ್ರಮಾಣ ಶೇ 98.80 ರಷ್ಟು ಇದೆ ಎಂದು ಸಚಿವಾಲಯ ಹೇಳಿದೆ.

 

See also  ದೇವೇಗೌಡರ ಜೀವನ ಚರಿತ್ರೆ ಮತ್ತು ಆಡಳಿತ ಅವಯ ಸಾಧನೆಗಳ ಕುರಿತ ಕೃತಿ ಲೋಕಾರ್ಪಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು