ನವದೆಹಲಿ, ಜ.4: ಯುಪಿಎ ಅಧ್ಯಕ್ಷೆ ಮತ್ತು ಕಾಂಗ್ರೆಸ್ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಬುಧವಾರ ರಾಷ್ಟ್ರ ರಾಜಧಾನಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾಖಲಾತಿಯು ತಪಾಸಣೆಗಾಗಿ ಎಂದು ಮೂಲಗಳು ತಿಳಿಸಿವೆ.
ಡಿಸೆಂಬರ್ ೨೮ ರಂದು ಕಾಂಗ್ರೆಸ್ ಸಂಸ್ಥಾಪನಾ ದಿನದಂದು ಸೋನಿಯಾ ಗಾಂಧಿ ಕೊನೆಯ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಅವರು ಡಿಸೆಂಬರ್ ೨೪ ರಂದು ದೆಹಲಿಯಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದರು.