ನವದೆಹಲಿ: ಪ್ರಾದೇಶಿಕ ವಾಯು ಸಂಪರ್ಕವನ್ನು ಸುಧಾರಿಸಲು 50 ಹೆಚ್ಚುವರಿ ವಿಮಾನ ನಿಲ್ದಾಣಗಳು, ವಾಟರ್ ಏರೋಡ್ರೋಮ್ ಮತ್ತು ಹೆಲಿಪೋರ್ಟ್ ಸ್ಥಾಪಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಪ್ರಕಟಿಸಿದ್ದಾರೆ.
2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುವಾಗ ಅವರು ಈ ಘೋಷಣೆ ಮಾಡಿದ್ದಾರೆ.
ಈ ಕ್ರಮವು ದೇಶಾದ್ಯಂತ ಪ್ರಾದೇಶಿಕ ಸಂಪರ್ಕವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಪ್ರಸ್ತುತ ಉಡಾನ್ ಯೋಜನೆಯನ್ನು ಮತ್ತಷ್ಟು ಉತ್ತೇಜಿಸುವ ನಿರೀಕ್ಷೆಯಿದೆ.
ಸಂಪರ್ಕವನ್ನು ಹೆಚ್ಚಿಸಲು 50 ಹೆಚ್ಚುವರಿ ವಿಮಾನ ನಿಲ್ದಾಣ, ಏರೋಡ್ರೋಮ್ ಮತ್ತು ಹೆಲಿಪ್ಯಾಡ್ಗಳು ಮತ್ತು ಜಲ ಮಾರ್ಗಗಳನ್ನು ನಿರ್ಮಿಸಲಾಗುವುದು ಎಂದು ಸೀತಾರಾಮನ್ ಹೇಳಿದರು.