ನವದೆಹಲಿ: ಉತ್ತರ ದೆಹಲಿಯಲ್ಲಿ 40 ವರ್ಷದ ವ್ಯಕ್ತಿಯನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸ್ಅ ಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಆರೋಪಿಗಳನ್ನು ಗುರುತಿಸಲಾಗಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಪ ಪೊಲೀಸ್ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ಅವರ ಪ್ರಕಾರ, ಮಂಗಳವಾರ ದೆಹಲಿಯ ಮೋರಿ ಗೇಟ್ ಬಳಿಯ ಅಂಗಡಿಯಲ್ಲಿ ಶವವಿರುವ ಬಗ್ಗೆ ಮಾಹಿತಿ ಬಂದಿದ್ದು, ನಂತರ ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ.
“ಪೊಲೀಸ್ ತಂಡವು ಸ್ಥಳಕ್ಕೆ ತಲುಪಿ ತಪಾಸಣೆ ನಡೆಸಿದೆ. ಮೃತನನ್ನು ಉತ್ತರ ಪ್ರದೇಶದ ಔರೈಯಾದ ಓಂ ನಗರದ ನಿವಾಸಿ ಅಖಿಲೇಶ್ ತಿವಾರಿ ಎಂದು ಗುರುತಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.
ಅಪರಾಧ ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ತಂಡಗಳು ಸ್ಥಳವನ್ನು ಪರಿಶೀಲಿಸಿವೆ. “ಸಂಬಂಧಿಕರ ಹೇಳಿಕೆಯನ್ನು ದಾಖಲಿಸಿದ ನಂತರ, ಶವವನ್ನು ಶವಪರೀಕ್ಷೆಗಾಗಿ ಸಬ್ಜಿ ಮಂಡಿ ಶವಾಗಾರಕ್ಕೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಸಮಯದಲ್ಲಿ, ಮೃತರ ತಲೆಬುರುಡೆಯಲ್ಲಿ ಗುಂಡು ಪತ್ತೆಯಾಗಿದ್ದು, ಅದು ಎಡ ಕಣ್ಣಿನಿಂದ ನುಸುಳಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ. ಸಬ್ಜಿ ಮಂಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.