ಹೊಸದಿಲ್ಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಬ್ರಿಟನ್ ಭಾಷಣವನ್ನು ಟೀಕಿಸಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು, ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ಮೃತಿ ಇರಾನಿ, “ರಾಹುಲ್ ಗಾಂಧಿ ಅವರು ಭಾರತವನ್ನು ವಿದೇಶಿಗರ ಗುಲಾಮರನ್ನಾಗಿ ಮಾಡಲು ವಿದೇಶಿ ಶಕ್ತಿಗಳಿಗೆ ಕರೆ ನೀಡಿದ್ದಾರೆ.
ಗಾಂಧಿ ದೇಶದ ಸಂಸತ್ತಿನಲ್ಲಿ ಕ್ಷಮೆಯಾಚಿಸಬೇಕು ಎಂದು ಸಚಿವರು ಒತ್ತಾಯಿಸಿದ್ದಾರೆ. “ಅವರು ವಿದೇಶಕ್ಕೆ ಹೋಗಿ ದೇಶ ಮತ್ತು ಅದರ ಸಂಸ್ಥೆಗಳನ್ನು ಅವಮಾನಿಸುವ ಕೆಲಸ ಮಾಡಿದರು. ಪ್ರಧಾನಿ ಮೋದಿ ವಿರುದ್ಧದ ದ್ವೇಷದಲ್ಲಿ ರಾಹುಲ್ ದೇಶ ವಿರೋಧಿಯಾಗಿ ಲಂಡನ್ ನಲ್ಲಿ ಕುಳಿತು ಪ್ರಜಾಪ್ರಭುತ್ವವನ್ನು ಅವಮಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.