ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ 24 ಗಂಟೆಗಳ ಅವಧಿಯಲ್ಲಿ 509 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ ಎಂದು ದೆಹಲಿ ಸರ್ಕಾರದ ಆರೋಗ್ಯ ಬುಲೆಟಿನ್ ತಿಳಿಸಿದೆ.
ಆದಾಗ್ಯೂ ಯಾವುದೇ ಸಾವು ಸಂಭವಿಸಿಲ್ಲ ಎಂದು ವರದಿಯಾಗಿದೆ. 424 ರೋಗಿಗಳು ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರಸ್ತುತ 1,795 ಆಗಿದೆ. ಕಳೆದ 24 ಗಂಟೆಗಳಲ್ಲಿ 1,918 ಜನರನ್ನು ಪರೀಕ್ಷಿಸಲಾಗಿದೆ ಎಂದು ಆರೋಗ್ಯ ಬುಲೆಟಿನ್ ಉಲ್ಲೇಖಿಸಿದೆ. ಅಲ್ಲದೆ, ಕಳೆದ 24 ಗಂಟೆಗಳಲ್ಲಿ 142 ಫಲಾನುಭವಿಗಳಿಗೆ ಲಸಿಕೆ ಹಾಕಲಾಗಿದೆ.