News Kannada
Sunday, March 03 2024
ದೆಹಲಿ

90 ಸಾವಿರ ಕೋಟಿ ರೂ. ವೆಚ್ಚದಲ್ಲಿ 26 ರಫೇಲ್‌ ಯುದ್ಧ ವಿಮಾನ ಖರೀದಿಗೆ ಕೇಂದ್ರ ಚಿಂತನೆ

90,000 crore. Centre plans to buy 26 Rafale fighter jets at a cost
Photo Credit : News Kannada

ನವದೆಹಲಿ: ಫ್ರಾನ್ಸ್‌ನಿಂದ ಸುಮಾರು 26 ರಫೇಲ್ ವಿಮಾನಗಳು ಮತ್ತು ಮೂರು ಸ್ಕಾರ್ಪಿಯನ್ ದರ್ಜೆಯ ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳನ್ನು ಖರೀದಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಜುಲೈ 13 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಪ್ಯಾರಿಸ್‌ಗೆ ಭೇಟಿ ನೀಡಲಿರುವ ಈ ಸಂದರ್ಭ ಒಪ್ಪಂದ ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಭಾರತವು ಫ್ರಾನ್ಸ್‌ನಿಂದ 36 ರಫೇಲ್ ವಿಮಾನಗಳನ್ನು ಖರೀದಿಸಿತ್ತು, ಆದರೆ ಅದನ್ನು ಭಾರತೀಯ ವಾಯುಪಡೆಗೆ ಸೇರ್ಪಡೆಗೊಳಿಸಲಾಗಿತ್ತು. ರಫೇಲ್‌ ವಿಮಾನವಲ್ಲದೆ ಈ ಬಾರಿ ಭಾರತೀಯ ನೌಕಾಪಡೆಗೆ ವಿಮಾನ ಮತ್ತು ಜಲಾಂತರ್ಗಾಮಿ ನೌಕೆಗಳನ್ನು ಖರೀದಿಸಲಾಗುತ್ತಿದೆ. ಈ ಪ್ರಸ್ತಾವನೆಯನ್ನು ರಕ್ಷಣಾ ಸಚಿವಾಲಯ ಮೋದಿ ಅವರ ಫ್ರಾನ್ಸ್ ಭೇಟಿಯ ವೇಳೆ ಒಪ್ಪಂದವನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಭಾರತೀಯ ನೌಕಾಪಡೆಯು 22 ಸಿಂಗಲ್ ಸೀಟರ್ ರಫೇಲ್ ವಿಮಾನಗಳು ಮತ್ತು ನಾಲ್ಕು ಟ್ರೈನರ್ ಜೆಟ್‌ಗಳನ್ನು ಪಡೆಯುವ ಸಾಧ್ಯತೆಯಿದೆ.

ಭಾರತೀಯ ವಾಯುಪಡೆ ವಿಮಾನಗಳು ಮತ್ತು ಜಲಾಂತರ್ಗಾಮಿಗಳ ಕೊರೆತೆ ಎದುರಿಸುತ್ತಿದ್ದು ಭದ್ರತಾ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ವಿಮಾನವಾಹಕ ನೌಕೆಗಳಾದ INS ವಿಕ್ರಮಾದಿತ್ಯ ಮತ್ತು ವಿಕ್ರಾಂತ್ ಗಳಲ್ಲಿ MiG-29 ವಿಮಾನಗಳು ಕಾರ್ಯನಿರ್ವಹಿಸುತ್ತಿವೆ. ಎರಡೂ ಒಪ್ಪಂದಗಳು 90,000 ಕೋಟಿ ರೂಪಾಯಿಗಿಂತ ಹೆಚ್ಚು ಮೌಲ್ಯದ್ದಾಗಿದೆ ಎಂದು ಅಂದಾಜಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು