News Kannada
Friday, February 23 2024
ದೆಹಲಿ

ಸಂಸತ್‌ ಚಳಿಗಾಲದ ಅಧಿವೇಶನಕ್ಕೂ ಮುನ್ನ ಇಂದು ಸರ್ವಪಕ್ಷ ಸಭೆ

All-party meeting to be held today ahead of winter session of Parliament
Photo Credit : News Kannada

ನವದೆಹಲಿ: ಡಿಸೆಂಬರ್ 4ರಿಂದ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು ಅದಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆಯಲಾಗಿದೆ. ಇದಕ್ಕೂ ಮುನ್ನ ಇಂದು(ಶನಿವಾರ) ಸರ್ವಪಕ್ಷ ಸಭೆ ನಡೆಯಲಿದೆ.

ಚಳಿಗಾಲ ಅಧಿವೇಶನ ಡಿಸೆಂಬರ್ 22ಕ್ಕೆ ಮುಕ್ತಾಯವಾಗಲಿದೆ. ನಾಳೆ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು ಹೀಗಾಗಿ ಇಂದು ಸರ್ವಪಕ್ಷ ಸಭೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸರ್ವಪಕ್ಷ ಸಭೆ ಕರೆದಿದ್ದಾರೆ.

ಸಭೆಯಲ್ಲಿ ಕೇಂದ್ರ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಪ್ರಸ್ತುತ, 37 ಮಸೂದೆಗಳು ಸಂಸತ್ತಿನಲ್ಲಿ ಬಾಕಿ ಉಳಿದಿವೆ ಅವುಗಳಲ್ಲಿ 12 ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಮತ್ತು ಏಳು ಮಸೂದೆಗಳು ಪರಿಚಯ, ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು