ದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಅವರ ಪತ್ನಿ ರಾಬ್ರಿ ದೇವಿ ಮತ್ತು ಅವರ ಪುತ್ರ, ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಯುಪಿಎ ಒಕ್ಕೂಟ ಸರ್ಕಾರದಲ್ಲಿ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್ ಯಾದವ್ ಅವರು ರೈಲ್ವೆ ಉದ್ಯೋಗಕ್ಕಾಗಿ ಭೂ ಹಗರಣ ಮಾಡಿದರು ಎಂದು ಜುಲೈನಲ್ಲಿ ಇಡಿ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿತ್ತು. ಇದರ ಜತೆಗೆ ಅವರ ಆಸ್ತಿಯನ್ನು ಕೂಡ ಜಪ್ತಿ ಮಾಡಿತ್ತು. ಈ ಜಪ್ತಿಯಲ್ಲಿ ಅವರ ಮಗ, ಪ್ರಸ್ತುತ ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೂ ನೋಟಿಸ್ ನೀಡಿ ಜಪ್ತಿ ಮಾಡಿತ್ತು. ನಂತರ ಲಾಲು ಪ್ರಸಾದ್ ಯಾದವ್ ಅವರ ಪತ್ನಿ ರಾಬ್ರಿ ದೇವಿ ಅವರಿಗೂ ನೋಟಿಸ್ ನೀಡಿ, ಪ್ರಕರಣ ದಾಖಲಿಸಿತ್ತು.
ಇದೀಗ ಈ ಬೆಳವಣಿಗೆಯಲ್ಲಿ ರೂಸ್ ಅವೆನ್ಯೂ ನ್ಯಾಯಾಲಯವು ಜಾಮೀನು ನೀಡಿ ಲಾಲು ಕುಟುಂಬಕ್ಕೆ ರಿಲೀಫ್ ನೀಡಿದೆ.